TSK

TSK · ಯೆಶಾಯ 31:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.

ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.

ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.

ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.

ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.