TSK

TSK · ಯೆಶಾಯ 33:10

مراجع Treasury of Scripture Knowledge في ಕನ್ನಡ IRV.

العودة إلى المقطع

ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.

ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.

ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,

ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.

¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.

ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.

ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!