2 ಸಮುವೇಲನು 23:6
TSK
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
TSK
مراجع Treasury of Scripture Knowledge في ಕನ್ನಡ IRV.
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.