TSK

TSK · ಯೆಶಾಯ 33:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.

ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.

ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;