ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
TSK
TSK · ಯೆಶಾಯ 33:23
مراجع Treasury of Scripture Knowledge في ಕನ್ನಡ IRV.
¶ ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.