ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.
TSK
TSK · ಯೆಶಾಯ 33:8
مراجع Treasury of Scripture Knowledge في ಕನ್ನಡ IRV.
ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.
¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.