TSK

TSK · ಯೆಶಾಯ 37:3

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.

ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.

ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.

ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”

ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.