ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ.
TSK
TSK · ಯೆಶಾಯ 38:12
مراجع Treasury of Scripture Knowledge في ಕನ್ನಡ IRV.
ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.
ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.
“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.
ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;
ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.