TSK

TSK · ಯೆಶಾಯ 38:19

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,

¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ

ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.

ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.