TSK

TSK · ಯೆಶಾಯ 39:2

مراجع Treasury of Scripture Knowledge في ಕನ್ನಡ IRV.

العودة إلى المقطع

ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.

ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.

¶ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು

ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,

ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.