TSK

TSK · ಯೆಶಾಯ 40:12

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.

ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.

ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.