TSK

TSK · ಯೆಶಾಯ 41:14

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.

ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.

ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.

ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.

ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”

‹ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.›

¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.