TSK

TSK · ಯೆಶಾಯ 41:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.

ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.