TSK

TSK · ಯೆಶಾಯ 42:10

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”

ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.