TSK

TSK · ಯೆಶಾಯ 42:14

مراجع Treasury of Scripture Knowledge في ಕನ್ನಡ IRV.

العودة إلى المقطع

ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.

ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.

ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.