TSK

TSK · ಯೆಶಾಯ 42:21

مراجع Treasury of Scripture Knowledge في ಕನ್ನಡ IRV.

العودة إلى المقطع

ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.

ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.

ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?

ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.

ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ಯೇಸು ಪ್ರತ್ಯುತ್ತರವಾಗಿ ಅವನಿಗೆ, ‹“ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” › ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

¶ ‹“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.›

‹ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ”› ಎಂದನು.

‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›

ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.