ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
TSK
TSK · ಯೆಶಾಯ 43:10
مراجع Treasury of Scripture Knowledge في ಕನ್ನಡ IRV.
ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
¶ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
‹ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.›
‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.
¶ ‹“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,›‹ದೇವರ ಸೃಷ್ಟಿಗೆ ಮೂಲನೂ ಆಗಿರುವ›‹‘ಆಮೆನ್’ ಎಂಬಾತನು›‹ಹೇಳುವುದೇನಂದರೆ,›