ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
TSK
TSK · ಯೆಶಾಯ 43:16
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.
ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
¶ ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.