ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
TSK
TSK · ಯೆಶಾಯ 43:25
مراجع Treasury of Scripture Knowledge في ಕನ್ನಡ IRV.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.
“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.