ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
TSK
TSK · ಯೆಶಾಯ 44:8
مراجع Treasury of Scripture Knowledge في ಕನ್ನಡ IRV.
¶ ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
¶ “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
¶ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.
“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
¶ ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
‹ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ”› ಎಂದನು.
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.