TSK

TSK · ಯೆಶಾಯ 45:21

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.

ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.

ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.

ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.

ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.

ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.