TSK

TSK · ಯೆಶಾಯ 45:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.

ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.

ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.

ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.

ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

¶ ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.