TSK

TSK · ಯೆಶಾಯ 45:8

مراجع Treasury of Scripture Knowledge في ಕನ್ನಡ IRV.

العودة إلى المقطع

ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

¶ “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.

ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.