ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
TSK
TSK · ಯೆಶಾಯ 47:10
مراجع Treasury of Scripture Knowledge في ಕನ್ನಡ IRV.
“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.
ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
¶ ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”