ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
TSK
TSK · ಯೆಶಾಯ 47:6
مراجع Treasury of Scripture Knowledge في ಕನ್ನಡ IRV.
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”
ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
¶ “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
¶ ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.