ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
TSK
TSK · ಯೆಶಾಯ 48:6
مراجع Treasury of Scripture Knowledge في ಕನ್ನಡ IRV.
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.
¶ ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.
‹ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.›
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.
¶ ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.