ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
TSK
TSK · ಯೆಶಾಯ 49:24
مراجع Treasury of Scripture Knowledge في ಕನ್ನಡ IRV.
ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.
ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.
‹ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.›