TSK

TSK · ಯೆಶಾಯ 49:25

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.

ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!

ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.

ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.

¶ ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”

¶ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.

ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.