ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
TSK
TSK · ಯೆಶಾಯ 49:26
مراجع Treasury of Scripture Knowledge في ಕನ್ನಡ IRV.
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
¶ “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.