¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
TSK
TSK · ಯೆಶಾಯ 5:25
مراجع Treasury of Scripture Knowledge في ಕನ್ನಡ IRV.
¶ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.
¶ ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.
ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.