TSK

TSK · ಯೆಶಾಯ 51:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

¶ ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.

¶ ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,

ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.

ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.

ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.

“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.

ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.