TSK

TSK · ಯೆಶಾಯ 52:10

مراجع Treasury of Scripture Knowledge في ಕನ್ನಡ IRV.

العودة إلى المقطع

ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.