TSK

TSK · ಯೆಶಾಯ 52:4

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.

ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.

¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›