ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;
TSK
TSK · ಯೆಶಾಯ 56:10
مراجع Treasury of Scripture Knowledge في ಕನ್ನಡ IRV.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
¶ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.
‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.