¶ ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
TSK
TSK · ಯೆಶಾಯ 58:2
مراجع Treasury of Scripture Knowledge في ಕನ್ನಡ IRV.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
¶ ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
‹ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,›
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›
ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.