ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.
TSK
TSK · ಯೆಶಾಯ 59:17
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.