ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
TSK
TSK · ಯೆಶಾಯ 63:11
مراجع Treasury of Scripture Knowledge في ಕನ್ನಡ IRV.
¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
¶ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.
ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
¶ ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.