ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
TSK
TSK · ಯೆಶಾಯ 63:17
مراجع Treasury of Scripture Knowledge في ಕನ್ನಡ IRV.
ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
¶ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.