TSK

TSK · ಯೆಶಾಯ 63:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.

ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.

ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.

ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.