TSK

TSK · ಯೆಶಾಯ 65:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.

ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

¶ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

‹ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.›

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.