TSK

TSK · ಯೆಶಾಯ 8:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.

ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.

¶ ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.