TSK

TSK · ಯೆಶಾಯ 8:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.

ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.

‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›

ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.