ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
TSK
TSK · ಯೆಶಾಯ 8:16
مراجع Treasury of Scripture Knowledge في ಕನ್ನಡ IRV.
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
¶ ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
¶ ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
¶ ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
¶ ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
¶ ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.