TSK

TSK · ಯೆಶಾಯ 8:18

مراجع Treasury of Scripture Knowledge في ಕನ್ನಡ IRV.

العودة إلى المقطع

ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.

¶ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

¶ ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.

ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.

ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.

ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.