TSK

TSK · ಯಾಕೋಬನು 1:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.

ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.

‹ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.›

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.