TSK

TSK · ಯಾಕೋಬನು 1:25

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.

ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

‹ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.›

ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, ‹“ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.›

‹ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.›

¶ ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.

ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.

ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

¶ ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.

ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.

¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›