TSK

TSK · ಯಾಕೋಬನು 1:8

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.

¶ ‹“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು›‹ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.›

ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.