¶ ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
TSK
TSK · ಯಾಕೋಬನು 2:23
مراجع Treasury of Scripture Knowledge في ಕನ್ನಡ IRV.
ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.
ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.
‹“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು.›
ಆತನು ಅವರಿಗೆ, ‹“ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ”› ಎಂದು ಹೇಳುತ್ತಿರುವಾಗ,
“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
¶ ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.