TSK

TSK · ಯಾಕೋಬನು 3:5

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!

ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.

ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.

ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.