TSK

TSK · ಯೆರೆಮಿಯ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.

ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.

¶ “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

¶ “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;